ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆಗೈದ ಜಿ. ಜಗದೀಶ್ ಅವರಿಗೆ ಬೀಳ್ಕೊಡುಗೆ
Thumbnail
ಉಡುಪಿ : ಜಿಲ್ಲಾಧಿಕಾರಿಯಾಗಿ 2 ವರ್ಷ ಸೇವೆ ಸಲ್ಲಿಸಿ ಪ್ರಸ್ತುತ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿರುವ ಜಿ. ಜಗದೀಶ್ ಅವರಿಗೆ ಇಂದು ( 31-08-2021) ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಹಾಗೂ ಸಹಾಯಕ ಆಯುಕ್ತರಾದ ರಾಜು ಕೆ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ಅರಣ್ಯಾಧಿಕಾರಿಗಳಾದ ಆಶಿಶ್ ರೆಡ್ಡಿ, ಕರಾವಳಿ ಕಾವಲು ಪಡೆ ಅಧೀಕ್ಷಕರಾದ ನಿಖಿಲ್, ಜಿಲ್ಲಾಧಿಕಾರಿಗಳ ಧರ್ಮಪತ್ನಿ ಸೌಮ್ಯ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Additional image
31 Aug 2021, 10:17 PM
Category: Kaup
Tags: