ಶಿಕ್ಷಕರ ದಿನಾಚರಣೆ ಅಂಗವಾಗಿ ಮೂವರು ಗೌರವಾನ್ವಿತ ಶಿಕ್ಷಕರಿಗೆ ಗೌರವ ಸಮರ್ಪಣೆ
Thumbnail
ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ದಿನಕರ ಶೆಟ್ಟಿ, ಮತ್ತು ನಿವೃತ್ತ ಶಿಕ್ಷಕಿ ದೇವಕಿ ಎನ್. ಸರ್ಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿ ಉಪನ್ಯಾಸಕ ರಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಪತಿ ಜೋಗಿ ಇವರುಗಳಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ನಿಕಟಪೂರ್ವ ಜಿಲ್ಲಾ ಗವರ್ನರ್ ರಾಜಾರಾಂ ಭಟ್, ಸಹಾಯಕ ಗವರ್ನರ್ ಪದ್ಮನಾಭ ಕಾಂಚನ್ ಆಗಮಿಸಿದ್ದರು. ಅಧ್ಯಾಪನ ವೃತ್ತಿಯು ಅತ್ಯಂತ ಹೆಮ್ಮೆಯ ಹಾಗೂ ಗೌರವದ ವೃತ್ತಿಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ರೋಟರಿ ಸಂಸ್ಥೆಯ ಸೇವೆ ಅಪಾರವಾದದ್ದು. ಪುಸ್ತಕ ವಿತರಣೆ, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಕಂಪ್ಯೂಟರ್ ವಿತರಣೆ, ಶಾಲಾ ಕಟ್ಟಡದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ವಿತರಣೆ ಮತ್ತು ಅಧ್ಯಾಪಕರುಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಗಳಂತಹ ಕಾರ್ಯಕ್ರಮಗಳ ಅನುಷ್ಠಾನ ಮಾಡುತ್ತಿದೆ ಎಂದರು. ಕಲ್ಯಾಣಪುರ ರೋಟರಿ ಕ್ಲಬ್ ಅಧ್ಯಕ್ಷ ರಾದ ಶಂಭುಶಂಕರ್, ಶಂಕರ್ ಸುವರ್ಣ, ವೃತ್ತಿ ಸೇವಾ ನಿರ್ದೇಶಕರು, ಕಾರ್ಯದರ್ಶಿಗಳಾದ ಪ್ರಕಾಶ್, ನಿಕಟಪೂರ್ವ ಅಧ್ಯಕ್ಷ ಡೆಸ್ಮಂಡ್ ವಾಸ್ ರವರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
09 Sep 2021, 10:13 AM
Category: Kaup
Tags: