ಇನ್ನಂಜೆ : ಯುವಕ ಮಂಡಲದ 2021 -22 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ
Thumbnail
ಕಾಪು : ಕಾಪು ತಾಲೂಕಿನ ಇನ್ನಂಜೆ ಯುವಕ ಮಂಡಲದ 2021 -22 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಇನ್ನಂಜೆ ಶಾಲಾ ದಾಸ ಭವನದಲ್ಲಿ ಜರಗಿತು. ಪದಪ್ರಧಾನ ಸಮಾರಂಭವನ್ನು ಡಾ. ರಮೇಶ್ ಮಿತ್ತಂತಾಯ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಚಂದ್ರಹಾಸ ಗುರುಸ್ವಾಮಿ ಇನ್ನಂಜೆ, S V H ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ನಂದನ್ ಕುಮಾರ್, ಇನ್ನಂಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಮಲ್ಲಿಕ ಆಚಾರ್ಯ, ಇನ್ನಂಜೆ ಗ್ರಾಮಪಂಚಾಯತ್ ನ ಮಾಜಿ ಅಧ್ಯಕ್ಷರಾದ ರವಿವರ್ಮ ಶೆಟ್ಟಿ ಇನ್ನಂಜೆ, ಯುವಕ ಮಂಡಲದ ಸಲಹಾ ಸಮಿತಿಯ ಸದಸ್ಯರಾದ ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷ ಉಮೇಶ್ ಆಚಾರ್ಯರಿಗೆ ನಿರ್ಗಮನ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಇವರು ಅಧಿಕಾರ ಹಸ್ತಾಂತರ ಮಾಡಿದರು. ಎಲ್ಲ ನೂತನ ಪದಾಧಿಕಾರಿಗಳಿಗೆ ಸಭೆಯಲ್ಲಿ ಯು. ನಂದನ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಸಂಘದ ಕಾರ್ಯದರ್ಶಿ ತರುಣ್ ಕುಮಾರ್ ಇವರು 2020-21 ನೇ ಸಾಲಿನ ವರದಿಯನ್ನು ಮಂಡಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಮಧುಸೂದನ ಆಚಾರ್ಯ ಇವರು ಕಾರ್ಯಕ್ರಮ ನಿರೂಪಿಸಿ, ನೂತನ ಕಾರ್ಯದರ್ಶಿ ಹರೀಶ್ ಪೂಜಾರಿ ವಂದಿಸಿದರು.
Additional image Additional image Additional image
13 Sep 2021, 04:22 PM
Category: Kaup
Tags: