ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರಕ್ಕೆ ಕಾಪು ಕ್ಷೇತ್ರದಲ್ಲಿ ಗ್ರಾಮ ಸಮಿತಿ ರಚನೆ ಮಾಡಲು ಪ್ರಮುಖರ ಸಭೆ
ಕಾಪು : ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕಾಪು ವಿಧಾನ ಸಭಾ ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ ಗ್ರಾಮ ಸಮಿತಿ ರಚನೆ ಮಾಡಲು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಸಭೆ ನಡೆಯಿತು.
ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಕಲ್ಯಾ ಸ್ವಾಗತಿಸಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್. ವಿ. ಶೆಟ್ಟಿ ಬಾಲಾಜಿ ದೇವಳದ ಇವರೆಗಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ದೇವಳದ ಅಭಿವೃದ್ಧಿ ಕಾರ್ಯಕ್ಕೆ ಕಾಪು ಕ್ಷೇತ್ರದ ಜನರ ಸಹಬಾಗಿತ್ವ ಮುಖ್ಯ ಎಂದರು.
ಸಭಾಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆಯವರು ಮಾತನಾಡಿ ಈಗಾಗಲೇ ದೇವಳದ 20% ಕಾಮಗಾರಿ ನಡೆದಿದ್ದು ಇನ್ನುಳಿದ 80% ಕಾಮಗಾರಿ ಆಗಬೇಕಿದೆ, ತಾಯಿಯ ಸೇವೆ ಮಾಡಲು ತಾಯಿ ನಮಗೆ ಅವಕಾಶ ಕೊಟ್ಟಿದ್ದಾರೆ ಆದ್ದರಿಂದ ಗ್ರಾಮ ಸಮಿತಿ ರಚನೆ ಮಾಡಿ ಪಕ್ಷಾತೀತ, ಜಾತ್ಯತೀತವಾಗಿ ಪಾಲ್ಗೊಂಡು ನಾವೆಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಅಮ್ಮನ ಸೇವೆ ಮಾಡೋಣ ಎಂದರು.
ನಂತರ ಪ್ರತೀ ಗ್ರಾಮದ ಮುಖಂಡರಿಂದ ಗ್ರಾಮ ಸಮಿತಿ ರಚನೆ ಮಾಡಲು ಅಭಿಪ್ರಾಯ ಸಂಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಮನೋಹರ್ ಶೆಟ್ಟಿ, ಗಂಗಾಧರ ಸುವರ್ಣ, ಮಾಧವ್ ಪಾಲನ್, ಸಾಂಸ್ಕೃತಿಕ ಸಮಿತಿಯ ಪ್ರಧಾನ ಸಂಚಾಲಕರಾದ ಲೀಲಾಧರ.ಕೆ. ಶೆಟ್ಟಿ, ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡೀಕೆರೆ, ಪುರಸಭಾ ವ್ಯಾಪ್ತಿಯ ಗ್ರಾಮ ಸಮಿತಿಯ ಮುಖ್ಯ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಗ್ರಾಮ ಸಮಿತಿಯ ಮುಖ್ಯ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.
