ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ, ಪೋಸ್ಟ್ ಕಾರ್ಡ್ ಅಭಿಯಾನ
Thumbnail
ಕಾಪು : ಬಿಜೆಪಿ ಯುವಮೋರ್ಚಾ ಕಾಪು ಮಂಡಲ ಹಾಗೂ ಬಿಜೆಪಿ ಯುವಮೋರ್ಚಾ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವೆ ಹಾಗೂ ಸಮರ್ಪಣಾ ಅಭಿಯಾನದ ಪ್ರಯುಕ್ತ "ರಕ್ತದಾನ ಶಿಬಿರ" ಹಾಗೂ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಹುಟ್ಟು ಹಬ್ಬದ ಶುಭಹಾರೈಕೆಯನ್ನು ಸಲ್ಲಿಸಲು "ಪೋಸ್ಟ್ ಕಾರ್ಡ್ " ಅಭಿಯಾನವನ್ನು ಹೆಜಮಾಡಿಯ ಬಿಲ್ಲವ ಸಭಾಭವನ ದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಪಡುಬಿದ್ರೆ ಯುವಮೋರ್ಚಾ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಕೀರ್ತನ್ ಪೂಜಾರಿ ವಹಿಸಿದ್ದರು ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿಗಳಾದ ಶ್ವೇತ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ ಪೆರ್ಣಂಕಿಲ, ಬಿಜೆಪಿ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ,ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಪ್ರಜ್ವಲ್ ಹೆಗಡೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ ಉಪ್ಪುಂದ, ಪಡುಬಿದ್ರಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಪಡುಬಿದ್ರಿ ,ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣರಾವ್ ಹಾಗೂ ಅನಿಲ್ ಶೆಟ್ಟಿ ,ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಪಲಿಮಾರ್ ಹಾಗೂ ರವಿ ಕೋಟ್ಯಾನ್ ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಹೆಜಮಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ನೀತಾ ಗುರುರಾಜ್, ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ ವೀಣಾಕುಮಾರಿ, ಉದ್ಯಮಿಗಳಾದ ಸಂದೇಶ್ ಶೆಟ್ಟಿ ಹೆಜಮಾಡಿ, ಜಿಲ್ಲಾ ಹಾಗು ಕಾಪು ಮಂಡಲದ ಯುವ ಮೋರ್ಚಾ ಪದಾಧಿಕಾರಿಗಳು ಪಂಚಾಯತ್ ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ರಕ್ತದಾನ ಶಿಬಿರದಲ್ಲಿ ಪ್ರಧಾನಿ ನರೇಂದ್ರ ಮೋದಿಜಿಯವರ 71 ವರುಷದ ಜನ್ಮದಿನಕ್ಕೆ ಸರಿಸಾಟಿಯಾಗಿ 71 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮವನ್ನು ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ಅಡ್ವೆ ಅವರು ನಿರೂಪಿಸಿ ವಂದಿಸಿದರು.
Additional image Additional image Additional image
19 Sep 2021, 04:43 PM
Category: Kaup
Tags: