ಕಟಪಾಡಿ ಪಡುಕುತ್ಯಾರಿನ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಪುನರುತ್ಥಾನ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗೆ ಮನವಿ
Thumbnail
ಬೆಂಗಳೂರು : ಕಟಪಾಡಿ ಪಡುಕುತ್ಯಾರಿನ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಡೇರ ಹೋಬಳಿ ಶ್ರೀಧರ ಆಚಾರ್ಯರ ನೇತೃತ್ವದಲ್ಲಿ ಮಹಾಸಂಸ್ಥಾನದ ಪುನರುತ್ಥಾನದ ಯೋಜನೆಗಳ ಮನವಿಯನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಬೆಂಗಳೂರಿನಲ್ಲಿ ಸಮರ್ಪಿಸಲಾಯಿತು. ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಉಪಾಧ್ಯಕ್ಷರಾದ ಚಂದ್ರಯ್ಯ ಆಚಾರ್ಯ ಕಳಿ, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶಿಲ್ಪಿ ಸತೀಶ್ ಆಚಾರ್ಯ ಕಾರ್ಕಳ, ಆನೆಗುಂದಿ ಶ್ರೀ ಸರಸ್ವತೀ ಎಜ್ಯುಕೇಶನಲ್ ಟ್ರಸ್ಟ್ (ಅಸೆಟ್ ) ಅಧ್ಯಕ್ಷ ಟಿ. ಸುಧಾಕರ ಆಚಾರ್ಯ ತ್ರಾಸಿ, ಪ್ರತಿಷ್ಠಾನದ ವಿಶ್ವಸ್ಥರಾದ ಹರೀಶ್ ಆಚಾರ್ಯ ಕಾರ್ಕಳ, ರವಿ ಆಚಾರ್ಯ ಕಾರ್ಕಳ, ಆನೆಗುಂದಿಯ ಸರಸ್ವತೀ ಪೀಠ ಪಂಚ ಸಿಂಹಾಸನ ವಿಕಾಸ ಸಮಿತಿ ಮತ್ತು ಬೆಂಗಳೂರು ಶಾಖಾ ಮಠ ಸಮಿತಿ ಅಧ್ಯಕ್ಷ ಹರಿಶ್ವಂದ್ರ ಎನ್. ಆಚಾರ್ಯ ಬೆಂಗಳೂರು, ಬೆಂಗಳೂರು ನಗರ ಪಾಲಿಕೆ ಸದಸ್ಯೆ ಹೇಮಲತಾ ಸತೀಶ್ ಶೇಟ್ ಹಾಜರಿದ್ದರು. ಪ್ರಸ್ತುತ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ,ಲಾಲಾಜಿ ಮೆಂಡನ್,ರಘುಪತಿ ಭಟ್, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ಅವರನ್ನು ಭೇಟಿ ಮಾಡಿ ಅವರ ಶಿಫಾರಸು ಮತ್ತು ಅವರ ಜತೆಗೂಡಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
22 Sep 2021, 08:42 PM
Category: Kaup
Tags: