ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ; ಪುರಸಭಾ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ರಚನೆಗೆ ಚಾಲನೆ
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವ ತಯಾರಿಗಾಗಿ ಪುರಸಭಾ ವ್ಯಾಪ್ತಿಯ ೨೩ ವಾರ್ಡುಗಳ ವಾರ್ಡ್ ಸಮಿತಿ ರಚನೆಗೆ ಸೆ. ೨೬ರಂದು ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಅಮ್ಮನ ಪ್ರೇರಣೆಯಂತೆ ಪ್ರತಿಯೊಬ್ಬ ಭಕ್ತರು ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಹಾಗೂ ಪ್ರತೀ ಮನೆಗೆ ಜೀರ್ಣೋದ್ದಾರದ ಸುದ್ದಿ ತಲುಪಿಸಲು ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮಗಳಲ್ಲಿಯೂ ಗ್ರಾಮ ಸಮಿತಿಯನ್ನು ರಚನೆ ಮಾಡಲಾಗುವುದು.
ಈ ಸಮಿತಿಯಲ್ಲಿ ಪ್ರತಿಯೊಬ್ಬ ಭಕ್ತರು ತಮ್ಮನ್ನು ತಾವು ತೊಡಗಿಸಿಕೊಂಡು ದೇಗುಲದ ಜೀರ್ಣೋದ್ಧಾರಕ್ಕೆ ತನು ಮನ ಧನದ ಸಹಕಾರ ನೀಡುವಂತೆ ಮನವಿ ಮಾಡಿದರು.
ಕಾಪು ಪುರಸಭಾ ವ್ಯಾಪ್ತಿಯ ಗ್ರಾಮ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ ಅವರ ಉಪಸ್ಥಿತಿಯಲ್ಲಿ ಮಲ್ಲಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಭಾರತ್ ನಗರ, ದಂಡತಿರ್ಥ, ಕಲ್ಯಾ ಮತ್ತು ಕೋತಲಕಟ್ಟೆ ವಾರ್ಡ್‌ಗಳಲ್ಲಿ ಸಮಿತಿ ರಚನೆ ನಡೆಸಲಾಯಿತು.
ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗೌರವ ಸಲಹೆಗಾರ ರತ್ನಾಕರ ಶೆಟ್ಟಿ ನಡಿಕೆರೆ, ಉಪಾಧ್ಯಕ್ಷರಾದ ಗಂಗಾಧರ ಸುವರ್ಣ, ಮಾಧವ ಪಾಲನ್, ಪ್ರಮುಖರಾದ ನಿರ್ಮಲ್ ಕುಮಾರ್ ಹೆಗ್ಡೆ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಹಾಗೂ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
