ದೇವಸ್ಥಾನ ಹಾಗೂ ಪ್ರಾರ್ಥನಾ ಕೇಂದ್ರಗಳ ಧ್ವಂಸವನ್ನು ವಿರೋಧಿಸಿ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ
Thumbnail
ಪಡುಬಿದ್ರಿ : ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಜಿಲ್ಲಾಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬಿಜೆಪಿ ಸರಕಾರದಿಂದ ರಾಜ್ಯ ದೇವಸ್ಥಾನ ಹಾಗೂ ಪ್ರಾರ್ಥನಾ ಕೇಂದ್ರಗಳ ಧ್ವಂಸವನ್ನು ವಿರೋಧಿಸಿ ಪಡುಬಿದ್ರಿಯಲ್ಲಿ ಸಂಜೆ ಬ್ರಹ್ಮಬೈದರ್ಕಳ ಗರಡಿ ಕಣ್ಣಂಗಾರ್ ಬಳಿಯಿಂದ ಪಡುಬಿದ್ರಿ ಪೇಟೆ ಬಸ್‌ನಿಲ್ದಾಣದವರೆಗೆ ಪಂಜಿನ ಮೆರವಣಿಗೆಯು ನಡೆಯಿತು. ಈ ಸಂದರ್ಭ ಮಾಜಿ‌ ಸಚಿವರಾದ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ವೈ. ಸುಕುಮಾರ್, ದೀಪಕ್ ಕೋಟ್ಯಾನ್, ನವೀನ್ ಚಂದ್ರ ಶೆಟ್ಟಿ, ರಮೀಝ್ ಪಡುಬಿದ್ರಿ, ಕರುಣಾಕರ್ ಪೂಜಾರಿ, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
29 Sep 2021, 11:31 PM
Category: Kaup
Tags: