ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯ
Thumbnail
ಕಾಪು‌: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲದ ವತಿಯಿಂದ ಗಾಂಧಿಜಯಂತಿ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸುರೇಂದ್ರ ಪಣಿಯೂರ್, ಹಿಂದುಳಿದ ವರ್ಗದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ,ಹಿಂದುಳಿದ ವರ್ಗಗಳ ಮೋರ್ಚಾದ ಕಾಪು ಮಂಡಲ ಅಧ್ಯಕ್ಷರಾದ ಸಂತೋಷ್ ಕುಮಾರ್, ಕಾರ್ಯದರ್ಶಿಗಳಾದ ರವಿ ಕೋಟ್ಯಾನ್, ಪ್ರಸಾದ್ ಪಲಿಮಾರ್, ಉಪಾಧ್ಯಕ್ಷರಾದ ಗಣೇಶ್ ಕುಮಾರ್, ಬೂತ್ ಅಧ್ಯಕ್ಷರಾದ ರಾಜೇಶ್ ಸುವರ್ಣ, ಕಾರ್ಯದರ್ಶಿ ನಿತೇಶ್ ಪುತ್ರನ್, ಮೋರ್ಚಾದ ಸದಸ್ಯರಾದ ಗಣೇಶ್ ಆಚಾರ್ಯ, ಹರೀಶ್ ಪೂಜಾರಿ, ಸುಧಾಕರ್ ಇನ್ನಂಜೆ, ಉಷಾ ಉದ್ಯಾವರ, ನಾಗೇಶ್ ತಿಂಗಳಾಯ, ಹಾಗು ಸ್ಥಳೀಯ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
01 Oct 2021, 06:38 PM
Category: Kaup
Tags: