ಇನ್ನಾ ಗ್ರಾಮ ಪಂಚಾಯತ್ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ
Thumbnail
ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಂದು ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಆಯಾ ವಾರ್ಡ್ ಗಳಲ್ಲಿ ಇನ್ನಾ ಗ್ರಾಮ ಪಂಚಾಯತ್ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯವು ಯಶಸ್ವಿಯಾಗಿ ನಡೆಯಿತು. ವಾರ್ಡಿನ ಸದಸ್ಯರಿಗೆ ಶಾಲೆಯ ಶಿಕ್ಷಕರಿಗೆ ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ಸಂಘ ಸಂಸ್ಥೆ , ಸಂಜೀವಿನಿ ಒಕ್ಕೂಟ , ಸ್ತ್ರೀ ಶಕ್ತಿ, ಸ್ವಸಹಾಯ ಸಂಘ, ಧರ್ಮಸ್ಥಳ ಸ್ವಸಹಾಯ ಯುವಕ-ಯುವತಿ ಮಂಡಲ, ಗ್ರಾಮಸ್ಥರಿಗೆ ಇನ್ನಾ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭ ಇನ್ನಾ ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.
Additional image Additional image
02 Oct 2021, 10:24 PM
Category: Kaup
Tags: