ಸ್ವರ್ಣಾ ನದಿಗೆ ಸಚಿವ ವಿ.ಸುನಿಲ್ ಕುಮಾರ್ ಬಾಗಿನ ಸಮರ್ಪಣೆ
Thumbnail
ಉಡುಪಿ : ಪೆರಂಪಳ್ಳಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬಳಿ, ಕೃಷ್ಣಾಂಗಾರಕ ಸ್ನಾನ ಘಟ್ಟ ಶೀಂಬ್ರ ಬಳಿ ಇಂಧನ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಅವರು ಸ್ವರ್ಣಾ ನದಿಗೆ ಇಂದು ಬಾಗಿನ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೌರಾಯುಕ್ತ ಉದಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
06 Oct 2021, 04:35 PM
Category: Kaup
Tags: