ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಅದಮಾರು - ಕನ್ನಡ ಗೀತ ಗಾಯನ
Thumbnail
ಪಡುಬಿದ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದಾದ್ಯಾಂತ ಆಯೋಜಿಸಲಾದ ಮಾತಾಡ್ ಮಾತಾಡ್ ಕನ್ನಡ ಕನ್ನಡಕ್ಕಾಗಿ ನಾವು, ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಪ್ರಯುಕ್ತ ಕನ್ನಡ ಗೀತ ಗಾಯನ ಕಾರ್ಯಕ್ರಮವು ಇಂದು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಅದಮಾರು ಇಲ್ಲಿ ನಡೆಯಿತು. ಉಚ್ಚಾರ ಸ್ಪಷ್ಟತೆಯೊಂದಿಗೆ ಬರೆದಂತೆ ಓದುವ ಹಾಗೂ ಓದಿದಂತೆ ಬರೆಯಲ್ಪಡುವ ಭಾಷೆ ಕನ್ನಡ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕಲಿಯಲು ಹಲವು ಭಾಷೆಗಳಿದ್ದರೂ, ವ್ಯವಹರಿಸಲು ಮಾತೃ ಭಾಷೆಯೇ ಇರಲಿ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಂ. ರಾಮಕೃಷ್ಣ ಪೈಯವರು ಪ್ರಾಸ್ತಾವಿಕ ನುಡಿಗಳನ್ನಾಡಿ ಸರ್ವರನ್ನು ಸ್ವಾಗತಿಸಿದರು. ಜೋಗದ ಸಿರಿ ಬೆಳಕಿನಲ್ಲಿ, ಬಾರಿಸು ಕನ್ನಡ ಡಿಂಡಿಮವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಕನ್ನಡದ ಗೀತೆಗಳನ್ನು ವಿದ್ಯಾರ್ಥಿಗಳು ಹಾಡಿದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕಾಂತ್ ರಾವ್‍ರವರು ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಪ್ರಾಂಶುಪಾಲರಾದ ಎಂ. ರಾಮಕೃಷ್ಣ ಪೈ, ಉಪಪ್ರಾಂಶುಪಾಲೆ ಡಾI ಒಲ್ವಿಟಾ ಡಿಸೋಜ, ಮಾಜಿ ಪ್ರಾಂಶುಪಾಲರು ಹಾಗೂ ಗೌರವ ಆಂಗ್ಲ ಭಾಷಾ ಉಪನ್ಯಾಸಕರಾದ ಬಿ. ಆರ್ ನಾಗರತ್ನ, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕಾಂತ್ ರಾವ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ನಾಯಕ್ ಮತ್ತು ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ನಿಶ್ಮಿತಾ ಶೆಟ್ಟಿ, ಸಂಸ್ಥೆಯ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿ, ಉಪನ್ಯಾಸಕರಾದ ಡಾI ಜಯಶಂಕರ್ ಕಂಗಣ್ಣಾರು ವಂದಿಸಿದರು.
Additional image
28 Oct 2021, 07:51 PM
Category: Kaup
Tags: