ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ
ಬೆಂಗಳೂರು : ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದ್ದು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
