ವರ್ಣ ವಿಹಾರ - 2021 : ಕಡಲ ಕಿನಾರೆಯಲ್ಲಿ ಜರಗಿದ ಚಿತ್ರಕಲಾ ಸ್ಪರ್ಧೆ
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್ ಜಂಟಿ ಸಹಯೋಗದೊಂದಿಗೆ ಉಜ್ವಲ್ ಪ್ರಿಂಟರ್ಸ್ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ವರ್ಣ ವಿಹಾರ - 2021 ಉಭಯ ಜಿಲ್ಲಾ ಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರ ಬಿಡಿಸುವ ಸ್ಪರ್ಧೆಯು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಜರಗಿತು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಥಮ, ದ್ವಿತೀಯ ಸ್ಥಾನಿಗಳಿಗೆ ಶಾಶ್ವತ ಫಲಕ, ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ಮಹಮ್ಮದ್ ನಿಯಾಜ್ ವಹಿಸಿದ್ದರು. ಈ ಸಂದರ್ಭ ಗಣ್ಯರು, ರೋಟರಿ ಪದಾಧಿಕಾರಿಗಳು, ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.
