ಮಿಲಾಗ್ರಿಸ್ ಕನ್ನಡ ಮಾಧ್ಯಮ ಶಾಲೆ ಕಲ್ಯಾಣಪುರ : ಇಂಟರಾಕ್ಟ್ ಕ್ಲಬ್ ಪದಪ್ರದಾನ
Thumbnail
ಉಡುಪಿ‌, ನ.16 : ಇಂಟರಾಕ್ಟ್ ಕ್ಲಬ್ ಮಿಲಾಗ್ರಿಸ್ ಕನ್ನಡ ಮಾಧ್ಯಮ ಹೈಸ್ಕೂಲ್ ಕಲ್ಯಾಣಪುರ ಇದರ 3ನೇ ವರ್ಷದ ಪದಪ್ರದಾನ ಸಮಾರಂಭ ಶಾಲಾ ಸಭಾಂಗಣದಲ್ಲಿ ನೆರವೇರಿತು. ರೋಟರಿ ಕ್ಲಬ್ ಕಲ್ಯಾಣಪುರದ ಅಧ್ಯಕ್ಷ ಶಂಭು ಶಂಕರ್ ರವರು ಇಂಟರಾಕ್ಟ್ ನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿ ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರೋಟರಿ ವಲಯದ ಇಂಟರಾಕ್ಟ್ ಸಂಯೋಜಕರಾದ ರಾಜರಾಮ ಐತಾಳ್ ರವರು ಸೂಕ್ತ ಮಾರ್ಗದರ್ಶನ ಹಾಗೂ ಮಾಹಿತಿಗಳನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ವಲಯ ಸೇನಾನಿ ಬ್ರಯಾನ್ ಡಿಸೋಜರವರು ವಿದ್ಯಾರ್ಥಿಗಳ ಭಾಗವಹಿಸುವಿಕೆಯ ಪ್ರಾಮುಖ್ಯತೆ ಕುರಿತು ಮಾತನಾಡಿ ಶುಭಾಶಯಗೈದರು. ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ಇಂಟರಾಕ್ಟ್ ಕ್ಲಬ್ ನಲ್ಲಿ ತೊಡಗಿಕೊಳ್ಳುವ ಮುಖೇನ ನಾಯಕತ್ವ ಮತ್ತು ಸೇವಾ ಮನೋಭಾವವನ್ನು ರೂಢಿಸಿಕೊಂಡು ಉತ್ತಮ ವಿದ್ಯಾರ್ಥಿ ಹಾಗೂ ಮುಂದೆ ಉತ್ತಮ ಪ್ರಜೆಗಳಾಗಿ ಬಾಳಲು ಸಹಕಾರಿಯಾಗುತ್ತದೆ ಎಂದರು. ರೋಟರಿ ಕಾರ್ಯದರ್ಶಿ ಪ್ರಕಾಶ್ ಕುಮಾರ್, ರಾಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಟೀಚರ್ ಕೋರ್ಡಿನೇಟರ್ ಸಿಪ್ರಿಯನ್ ರವರು ಕಾರ್ಯಕ್ರಮ ಸಂಯೋಜಿಸಿ, ವರದಿ ವಾಚಿಸಿದರು.
Additional image Additional image
16 Nov 2021, 10:05 PM
Category: Kaup
Tags: