ಮಣಿಪಾಲ : ಆರ್ ಸೆಟಿ ತರಬೇತಿ ಸಮಾರೋಪ
Thumbnail
ಮಣಿಪಾಲ : ಸ್ವ ಉದ್ಯೋಗದ ಸ್ಥಾಪನೆ ಮತ್ತು ಬೆಳವಣಿಗೆಗೆ ಆಧುನಿಕ ಸಮಾಜದಲ್ಲಿ ವಿಫುಲ ಅವಕಾಶಗಳಿದ್ದು ಯುವಕರು ಇದನ್ನು ಯೋಗ್ಯ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಣಿಪಾಲ ಕೆನರಾ ಬ್ಯಾಂಕ್ ನ ಅಧಿಕಾರಿ ಹೆಚ್ ಆರ್ ವಿಭಾಗದ ಮುಖ್ಯಸ್ಥ ಜಯಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಣಿಪಾಲದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ‌ ಭಾಗವಹಿಸಿ ಅವರು ಮಾತನಾಡಿದರು. ಸ್ವ ಉದ್ಯೋಗದಲ್ಲಿ ಆತ್ಮವಿಶ್ವಾಸ ಮತ್ತು ಪ್ರಾಮಾಣಿಕತೆ ಇದ್ದಾಗ ಮಾತ್ರ ಯಶಸ್ಸು ಸಾಧ್ಯ. ನಮ್ಮ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದ ಯುವಕರ ಬಾಳು ಉಜ್ವಲವಾಗಿ, ಸಾಮಾಜಿಕ ಬದ್ಧತೆಯ ಜೊತೆಗೆ ಮಾದರಿ ಬದುಕಾಗಿ ರೂಪುಗೊಳ್ಳಲಿ ಎಂದು ಅವರು ಹಾರೈಸಿದರು. ಸಂಸ್ಥೆಯ ನಿರ್ದೇಶಕಿ ಸವಿತಾ ನಾಯಕ್,ಉಪನ್ಯಾಸಕ ವರ್ಗ,ಕಛೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಅಕ್ಟೋಬರ್ ಹದಿನೆಂಟರಿಂದ ನವೆಂಬರ್ ಹದಿನೇಳರವರೆಗೆ ನಡೆದ ಒಂದು ತಿಂಗಳ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಉಪನ್ಯಾಸಕಿ ಶ್ರೇಯಾ ಸ್ವಾಗತಿಸಿ, ನಿರೂಪಿಸಿದರು. ಸಂತೋಷ್ ಕುಮಾರ್ ವಂದಿಸಿದರು. ವರದಿ : ವಿನಯ್ ಆರ್ ಭಟ್, ಕುಕ್ಕುಜೆ
Additional image Additional image
19 Nov 2021, 04:33 PM
Category: Kaup
Tags: