ಕುತ್ಯಾರುವಿನಲ್ಲಿ ನವೆಂಬರ್ 26ರಂದು ಸನ್ಮಾನ ಕಾರ್ಯಕ್ರಮ, ಗೀತಗಾಯನ
ಕಾಪು : ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ನ ಆಶ್ರಯದಲ್ಲಿ ನವೆಂಬರ್ 26 ರ ಶುಕ್ರವಾರ ಕನ್ನಡ ಜಾನಪದ ಪರಿಷತ್ ನ ಉಡುಪಿ ಜಿಲ್ಲಾ ಅಧ್ಯಕ್ಷರೂ , ಖ್ಯಾತ ಜಾನಪದ ಗಾಯಕರೂ ಆದ ಡಾ. ಗಣೇಶ್ ಗಂಗೊಳ್ಳಿ ಇವರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಕನ್ನಡ ಜಾನಪದ ಕೋಗಿಲೆ ಬಿರುದಾಂಕಿತ ಡಾ. ಗಂಗೊಳ್ಳಿಯವರು ಕನ್ನಡ ನಾಡಿನ ಜಾನಪದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ವಿಶಿಷ್ಟ ಕೊಡುಗೆಯನ್ನು ನೀಡುತ್ತಿರುವ ಕಲಾಸಾಧಕ. ಕರ್ನಾಟಕ ಜಾನಪದ ಸಾಹಿತ್ಯ ಸೇವೆಗಾಗಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನವಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವಿದ್ವಾನ್ ಶಂಭುದಾಸ ಗುರೂಜಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಪು ತಾಲೂಕು ಕಸಾಪ ಪೂರ್ವಾಧ್ಯಕ್ಷ ಪುಂಡಲೀಕ ಮರಾಠೆ, ಮುದರಂಗಡಿ ಸರಕಾರಿ ಪ.ಪೂ. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಭಾಸ್ಕರ ವೈ.ಜಿ. ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ನಂತರ ಡಾ. ಗಣೇಶ್ ಗಂಗೊಳ್ಳಿಯವರಿಂದ 'ಗೀತಗಾಯನ' ಸಂಗೀತ ಕಾರ್ಯಕ್ರಮ ಜರುಗಲಿದೆ.
ಪ್ರಾಂಶುಪಾಲ ಗುರುದತ್ತ ಸೋಮಯಾಜಿ , ಶಿಕ್ಷಕವೃಂದ ಮತ್ತು ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಲಿರುವರು.
