ಜಲ್ ಜೀವನ್ ಮಿಷನ್ ವತಿಯಿಂದ ಶಾಲಾ ಮಕ್ಕಳ ಜಾಥಾ ಕಾರ್ಯಕ್ರಮ, ಭಿತ್ತಿಪತ್ರ ತಯಾರಿಸುವ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ
ಮಂಗಳೂರು : ಮಂಗಳೂರು ತಾಲೂಕಿನ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಜಲ್ ಜೀವನ ಮಿಷನ್ನಿನ ವತಿಯಿಂದ ಶಾಲಾ ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ, ಭಿತ್ತಿಪತ್ರ ತಯಾರಿಸುವ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ ಮಾಡಲಾಯಿತು.
ಶಾಲಾ ಮಕ್ಕಳಿಗೆ ನೀರಿನ ಸಂರಕ್ಷಣೆ, ಬಳಕೆ ಮತ್ತು ಜಲಮಾಲಿನ್ಯದಿಂದಾಗುವ ಹಾನಿ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ ಮತ್ತು ಭಿತ್ತಿಪತ್ರ ತಯಾರಿಸುವ ಸ್ಪರ್ಧೆ ಮಾಡಲಾಗಿತ್ತು. ಭಿತ್ತಿಪತ್ರ ತಯಾರಿಸುವ ಸ್ಪರ್ಧೆಯಲ್ಲಿ ಸರಿ ಸುಮಾರು15 ವಿಧ್ಯಾರ್ಥಿಗಳು ಮತ್ತು ಚಿತ್ರಕಲೆಯಲ್ಲಿ 22 ವಿಧ್ಯಾರ್ಥಿಗಳು ಸ್ಪರ್ಧಿಸಿದ್ದರು. ಅನುಕ್ರಮವಾಗಿ ಪ್ರತಿ ಸ್ಪರ್ಧೆಗೂ ಪ್ರಥಮ, ದ್ವಿತಿಯ ಮತ್ತು ತೃತೀಯ ಬಹುಮಾನಗಳನ್ನು ಮುಖ್ಯೋಪಾಧ್ಯಾಯರು ಘೋಷಿಸಿದರು.
ಸೂರಿಂಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಶೆಟ್ಟಿ ಬಹುಮಾನ ವಿತರಿಸಿದರು. ನಂತರ ಗ್ರಾಮದ ಬೀದಿಗಳಲ್ಲಿ ಮಕ್ಕಳೆ ತಯಾರಿಸಿದ ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ ಘೋಷಣೆಗಳನ್ನು ಹೇಳುತ್ತಾ ಶಾಲಾ ಮಕ್ಕಳ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ ವೃಂದ ಮತ್ತು ಪಂಚಾಯತ್ ಸಿಬ್ಬಂದಿ ಸಹಕರಿಸಿದರು.
