ಯುವಜನರ ಆರೋಗ್ಯಪೂರ್ಣ ಮನಸ್ಸಿಗಾಗಿ ಯೋಗ - ಇದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮಂತ್ರ - ಡಾ| ಹೆರಾಲ್ಡ್ ಐವನ್ ಮೋನಿಸ್
Thumbnail
ಶಿರ್ವ: ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಿಕೊಳ್ಳುವ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗಗುರುಗಳಾದ ರಂಜಿತ್ ಪುನರ್ ರವರು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು. ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆ, ಯೋಗ ಮತ್ತು ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯವಂತರಾಗಬೇಕು. ಇಂದಿನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲ ಉದ್ದೇಶವು ಆರೋಗ್ಯಯುತ ಯುವಜನರನ್ನು ರೂಪಿಸಲು ಯೋಗ ಮತ್ತು ಕ್ರೀಡಾ ಕಡ್ಡಾಯವಾಗಿ ಶಿಕ್ಷಣದಲ್ಲಿ ಭಾಗವಾಗಿದೆ. ಈ ಶಿಬಿರದ ಪ್ರಯೋಜನವನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ಪಡೆದು ಮುಂದೆ ಇತರರಿಗೆ ಮಾದರಿಯಾಗಿ ಸಮಾಜಸೇವೆಯನ್ನು ಮಾಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಗುರುಗಳಾದ ಅನಂತ ರಾಯ ಶೆಣೈ , ಕಾಲೇಜಿನ ವಿದ್ಯಾರ್ಥಿ ಸಂಘದ ನಿರ್ದೇಶಕಿ ಯಶೋಧ , ಹಿರಿಯ ಉಪನ್ಯಾಸಕ ವಿಠಲ್ ನಾಯಕ್, ಯೋಗ ಮತ್ತು ಫಿಟ್ನೆಸ್ ಸೆಲ್ ನಿರ್ದೇಶಕ ಜೆಫ್ ಸನ್ನಿ ಡಿಸೋಜಾ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಅಣ್ಣಯ್ಯ, ಅಧ್ಯಾಪಕ ವೃಂದ, ಆಡಳಿತ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಪ್ತಿ ಮತ್ತು ಬಳಗ ಪ್ರಾರ್ಥಿಸಿ, ಚಂದನ ಸ್ವಾಗತಿಸಿ, ಹರ್ಷಿತ ಕಾರ್ಯಕ್ರಮ ನಿರೂಪಿಸಿ, ಶ್ರಾವ್ಯ ವಂದಿಸಿದರು.
Additional image Additional image Additional image
29 Nov 2021, 06:36 PM
Category: Kaup
Tags: