ಶಿರ್ವ ಗ್ರಾಮ ಪಂಚಾಯತ್ : ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ
Thumbnail
ಶಿರ್ವ : ಜಿ.ಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯವರ ಆದೇಶದಂತೆ ಶಿರ್ವ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿರ್ವ ಗ್ರಾಮ ಪಂಚಾಯತ್ ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ತ್ಯಾಜ್ಯ, ಕಸ , ಪ್ಲಾಸ್ಟಿಕ್ ನಿಯಂತ್ರಣ ಮಾಡುವ ಉದ್ದೇಶದಿಂದ ಶಿರ್ವ ಪೇಟೆಯಿಂದ ಸಿಧ್ಧಿವಿನಾಯಕ ದೇವಸ್ಥಾನದವರೆಗೆ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಬಸ್ಸು ನಿಲ್ದಾಣ, ಸಮುದಾಯ ಆರೋಗ್ಯ ಕೇಂದ್ರ, ಶಾಲೆ, ಚರ್ಚ್ ಮುಂಬಾಗ ದಲ್ಲಿ ಹರಡಿದ್ದ ಕಸ ತ್ಯಾಜ್ಯ ವನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಅನಂತಪದ್ಮನಾಭನಾಯಕ್, ಕಾರ್ಯದರ್ಶಿ ಮಂಗಳಾ ಕೆ.ವಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗೀತಾವಾಗ್ಲೆ, SLRM ಘಟಕದ ಮೇಲ್ವಿಚರಕರಾದ ಕಿಶೋರ್, ರಕ್ಷಿತ್ ಗ್ರಾಮ ಪಂಚಾಯತ್ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಸ್ವ ಸಹಾಯ ಗುಂಪಿನ ಸದಸ್ಯರು, SLRM ಘಟಕದ ಸದಸ್ಯರು ಭಾಗವಹಿಸಿದ್ದರು.
02 Dec 2021, 03:06 PM
Category: Kaup
Tags: