ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ
ಶಿರ್ವ: . ಕಂಪ್ಯೂಟರ್ ಜ್ಞಾನ ಇಂದಿನ ಯುವಕರಲ್ಲಿ ಅತ್ಯಂತ ಅವಶ್ಯಕವಾಗಿದೆ. ಕಲಿಕೆಯ ಜೊತೆಗೆ ಇದನ್ನು ಸಮರ್ಪಕವಾಗಿ ಮುಂದೆ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಅಳವಡಿಸಿಕೊಂಡದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಿಸಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಕಚೇರಿ “ಅಧಿಕ್ಷಕಿ ಡೊರಿಯನ್ ಡಿಸಿಲ್ವಾ ರವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ನುಡಿದರು.
ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲಾ ಕಾರ್ಯಗಳು ಎಲ್ಲಾ ಕ್ಷೇತ್ರಗಳಲ್ಲಿ ಸುಲಭವಾಗಿ ನಡೆಯಲು ಮತ್ತು ಅತ್ಯಂತ ವೇಗವಾಗಿ ಪರಿಣಾಮಕಾರಿಯಾಗಿ ಮಾನವನ ಶೇಕಡ 95 ಕೆಲಸವನ್ನು ಕಂಪ್ಯೂಟರ್ ಬಳಕೆಯಿಂದ ಸಾಗುತ್ತಿದೆ. ಇಂದಿನ ಸಾಂಕ್ರಾಮಿಕ ಕಾಯಿಲೆಗಳ ಹಾವಳಿಯಲ್ಲಿಯು ಅತ್ಯುತ್ತಮ ತಂತ್ರಜ್ಞಾನದ ಆವಿಷ್ಕಾರದಿಂದ ವಿದ್ಯಾರ್ಥಿಗಳಿಗೆ ಯಾವುದೇ ಒಂದು ತೊಂದರೆಗಳಿಲ್ಲದೆ ಶಿಕ್ಷಣವನ್ನು ನೀಡಲು ಕಂಪ್ಯೂಟರ್ ವಿದ್ಯೆ ಮತ್ತು ಸಮರ್ಪಕ ಬಳಕೆ ಮಾಡುವುದರಿಂದ ಎಲ್ಲ ಚಟುವಟಿಕೆಗಳು ನಡೆಯಲಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು.
ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಶೈಕ್ಷಣಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಕಲಿಕೆ ಇಂದಿನ ದಿನ ಅತ್ಯಂತ ಪ್ರಮುಖವಾಗಿದೆ.ಇದರ ಪ್ರಯುಕ್ತ ಕಾಲೇಜಿನಲ್ಲಿ ವಿಭಾಗದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಬೇಸಿಕ್ ಮತ್ತು ಟ್ಯಾಲಿ ಕೋರ್ಸುಗಳ ತರಬೇತಿ ನೀಡಿ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಇದರ ಪ್ರಯೋಜನವನ್ನು ಪಡೆದುಕೊಂಡ ಮುಂದಿನ ಉದ್ಯೋಗ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಇಂಥ ಸರ್ಟಿಫಿಕೇಟ್ ಗಳು ವಿದ್ಯಾರ್ಥಿಗಳಿಗೆ ಸಹಾಯಕಾರಿ ಎಂದು ಮಾತನಾಡಿದರು.
ನಿವೇದಿತಾ ನಿಖಿಲ್ ಪೂಜಾರಿ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಅಧಿಕಾರಿ ಯಶೋದ, ಪ್ರಿಯಾಂಕ, ಅಧ್ಯಾಪಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಂಪ್ಯೂಟರ್ ಸಾಕ್ಷರತೆ ಕೋಶದ ಸಂಯೋಜಕಿ ದಿವ್ಯಶ್ರೀ ರವರು ಸ್ವಾಗತಿಸಿ, ಪ್ರೀತಿಕಾ ವಂದಿಸಿದರು. ಚೈತ್ರ ಮತ್ತು ಬಳಗ ಪ್ರಾರ್ಥಿಸಿ ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು.
