ವಿದ್ಯಾಶ್ರಯ-2021 : ಇನ್ನಾ ಬಂಟರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ
Thumbnail
ಕಾರ್ಕಳ : ಇಲ್ಲಿನ ಇನ್ನಾ ಬಂಟರ ಸಂಘ (ರಿ.) ಇನ್ನಾದಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಂಘದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ವಿದ್ಯಾಶ್ರಯ-2021 ಇಂದು ಇನ್ನಾದ ಕಾಚೂರು ಪರಾರಿ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ವ್ಯ.ಸೇ.ಸ.ಬ್ಯಾಂಕ್ ಮುಂಡ್ಕೂರು ಇದರ ಅಧ್ಯಕ್ಷರಾದ ಎಮ್. ವಾದಿರಾಜ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮುಖ್ಯ ಅತಿಥಿಯಾಗಿ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಇನ್ನಾ ಬಂಟರ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ವಿದ್ಯಾರ್ಥಿಗಳು, ಸಂಘದ ಸಲಹೆಗಾರರು, ಸದಸ್ಯರು ಉಪಸ್ಥಿತರಿದ್ದರು.
05 Dec 2021, 08:08 PM
Category: Kaup
Tags: