ಪಡು ಕುತ್ಯಾರು : ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಭಜನಾ ಮಂಗಲೋತ್ಸವ ಸಂಪನ್ನ
ಕಾಪು : ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡು ಕುತ್ಯಾರು ಗ್ರಾಮದ ಶ್ರೀ ದುರ್ಗಾಮಂದಿರದಲ್ಲಿ ಡಿಸೆಂಬರ್ 05ರಂದು ವಾರ್ಷಿಕ ಭಜನಾ ಮಂಗಲೋತ್ಸವವು ಸಂಪನ್ನಗೊಂಡಿತು.
ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಆಚಾರ್ಯ, ಕಾರ್ಯದರ್ಶಿ ಸುರೇಶ್ ಆಚಾರ್ಯ, ಗ್ರಾಮ ಮೋಕ್ತೆಶರ್ ಮತ್ತು ಗೌರವ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಕೂಡುವಳಿಕೆಯ ಸದಸ್ಯರು, ದುರ್ಗಾದೇವಿ ಮಹಿಳಾ ಮಂಡಳಿ, ಸಂಘದ ಎಲ್ಲಾ ಸದಸ್ಯರು, ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಮತ್ತು ಇತರೆ ಗ್ರಾಮದ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
