ಉಡುಪಿ : ಮಹಾ ಪರಿನಿರ್ವಾಣ ದಿನ
Thumbnail
ಉಡುಪಿ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ, ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೋಶನ್, ಜಿ.ಪಂ. ಉಪಕಾರ್ಯದರ್ಶಿ ಕಿರಣ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
06 Dec 2021, 06:12 PM
Category: Kaup
Tags: