ಬೆಳದಿಂಗಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಮಿತಾಂಜಲಿ ಕಿರಣ್ ಆಯ್ಕೆ
Thumbnail
ಉಡುಪಿ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ನಡೆಯುವ ಉಡುಪಿ ಜಿಲ್ಲೆಯ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಚಿನಂಪ-2021ರ ಸಮ್ಮೇಳನಾಧ್ಯಕ್ಷೆಯಾಗಿ ಅಮಿತಾಂಜಲಿ ಕಿರಣ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಉಡುಪಿ ಬೈಲೂರು ವಾಸುದೇವ ಕೃಪಾ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕಸೂತಿ, ಬರವಣಿಗೆ, ಓದು, ರಂಗಭೂಮಿ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ಡಿ.19ರಂದು ಸಂಜೆ 5ರಿಂದ 9 ಗಂಟೆ ತನಕ ಹೊರಾಂಗಣದ ಸಂಗೀತ ಕಾರಂಜಿಯ ವೀಕ್ಷಣಾ ಗ್ಯಾಲರಿಯಲ್ಲಿಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ 27 ಕವಿಗಳು ಭಾಗವಹಿಸಲಿದ್ದಾರೆ. ಅಲ್ಲದೇ ಗೋಪಾಲ ತ್ರಾಸಿ ಅವರ ಲಂಡನ್ ಟು ವ್ಯಾಟಿಕನ್ ಸಿಟಿ ಕೃತಿ ಬಿಡುಗಡೆಗೊಳ್ಳಲಿದೆ. ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ನೀಲಾವರ ಸುರೇಂದ್ರ ಅಡಿಗ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
09 Dec 2021, 11:01 AM
Category: Kaup
Tags: