ಡಿಸೆಂಬರ್ 11: ಕರ್ನಾಟಕ ಜಾನಪದ ಪರಿಷತ್ತು ಕಾಪು ತಾಲೂಕು ಘಟಕದ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ, ಸಾಂಸ್ಕೃತಿಕ ಕಾರ್ಯಕ್ರಮ
Thumbnail
ಕಾಪು : ಕರ್ನಾಟಕ ಜಾನಪದ ಪರಿಷತ್ತು ಕಾಪು ತಾಲೂಕು ಘಟಕದ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ, ಸಾಂಸ್ಕೃತಿಕ ಕಾರ್ಯಕ್ರಮವು ಪಡುಬಿದ್ರಿ ಬಂಟರ ಸಂಘದ ಹೊರಾಂಗಣದಲ್ಲಿ ಡಿಸೆಂಬರ್ 11ರಂದು ನಡೆಯಲಿದೆ ಎಂದು ಜಾನಪದ ಪರಿಷತ್ತಿನ ಅಧ್ಯಕ್ಷ ಸಮಾಜರತ್ನ ಲೀಲಾಧರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಾಪು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಿತ ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಜಾನಪದ ವಿದ್ವಾಂಸರಾದ ಕೆ.ಎಲ್. ಕುಂಡಂತಾಯ, ಡಾ| ವೈ. ಎನ್. ಶೆಟ್ಟಿ, ಸುರೇಶ್ ಪಿ. ಶೆಟ್ಟಿ ಗುರ್ಮೆ ಉಪನ್ಯಾಸ ನೀಡಲಿದ್ದು, ಜಾನಪದ ಕಲಾವಿದರನ್ನು ಸಮ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಂಗೀಲು ಕುಣಿತ, ಕೊಳಲು ವಾದನ, ಪಾರ್ದನ, ಕರಗ ಕೋಲಾಟ, ಪೂಜಾ ಕುಣಿತ, ದಶಾವತಾಶ ನೃತ್ಯರೂಪಕ, ಆಟಿ ಕಳೆಂಜ, ಮಹಾಕಾಳಿ ಕುಣಿತ ನಡೆಯಲಿದೆ ಎಂದರು. ಪಡುಬಿದ್ರಿ ಸಿರಿಕಮಲ ಪ್ರಕಾಶನದ ಪ್ರಕಾಶಕ ಡಾ| ವೈ.ಎನ್. ಶೆಟ್ಟಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಗುರುಚರಣ್ ಪೊಲಿಪು, ರವೀಂದ್ರ ಮಲ್ಲಾರು ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
10 Dec 2021, 08:20 PM
Category: Kaup
Tags: