ತುಳುಕೂಟ ಉಡುಪಿ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ
ಉಡುಪಿ : ತುಳುಕೂಟ (ರಿ.) ಉಡುಪಿ ವತಿಯಿಂದ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರರವನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸನ್ಮಾನಿಸಿ ಮಾತನಾಡಿದ ತುಳುಕೂಟ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಫಾರೂಕ್ ರವರ ಸಮಾಜ ಸೇವೆ ಇನ್ನಷ್ಟು ಮುಂದುವರೆಯಲಿ. ಇನ್ನಷ್ಟು ಪ್ರಶಸ್ತಿಯ ಗರಿ ಸಿಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ವರ್ತಕರ ಸಂಘ ಉಡುಪಿ ಇದರ ಅಧ್ಯಕ್ಷ ದಿವಾಕರ ಸನಿಲ್, ಸಮಾಜ ಸೇವಾ ವೇದಿಕೆ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು, ತುಳುಕೂಟದ ಸದಸ್ಯರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
