ಕಾಪು ಪುರಸಭಾ ಚುನಾವಣೆ : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ಇಬ್ಬರು ಅಭ್ಯರ್ಥಿಗಳು ಕಣಕ್ಕೆ
Thumbnail
ಕಾಪು : ಜನಕಲ್ಯಾಣದ ಬಗ್ಗೆ ತನ್ನದೇ ಆದ ದೂರದೃಷ್ಟಿಯನ್ನು ಹೊಂದಿ, ಚುನಾವಣೆಯಲ್ಲಿ ವಾಮಮಾರ್ಗಗಳನ್ನು ಅನುಸರಿಸದೇ ಜನರ ಭಾವುಕತೆಗೆ ಮಹತ್ವ ನೀಡಿ ಮೌಲ್ಯಗಳಿಗೆ ಬದ್ಧವಾಗಿ ಸ್ಪರ್ಧಿಸಿ, ಕಾಪು ಪುರಸಭೆ ಆಗುವುದಕ್ಕಿಂತ ಮೊದಲು ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಸ್ಪರ್ಧಿಸಿ ಜಯಗಳಿಸಿ, ಜನಸೇವೆ ಮಾಡಿದ ಹಿನ್ನೆಲೆಯ ವ್ಯಕ್ತಿಗಳನ್ನು ಸ್ಪರ್ಧಾ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಈ ಬಾರಿ ಕಾಪು ಪುರಸಭಾ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೆ ಸ್ಪರ್ಧಿಸಲು ತೀರ್ಮಾನಿಸಲಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಉದ್ಯಾವರ ತಿಳಿಸಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಕಾಪು ಪುರಸಭಾ ಚುನಾವಣೆಯಲ್ಲಿ 17ನೇ ಬಡಗರಗುತ್ತು ವಾಡ್೯ನಲ್ಲಿ ಗುಲ್ಶನ್ ಮೊಹಮ್ಮದ್, 18ನೇ ಕೊಂಬಗುಡ್ಡೆ ವಾಡ್೯ನಿಂದ ಅನ್ವರ್ ಅಲಿ ಕಾಪು ಸ್ಪರ್ಧಿಸಲಿದ್ದಾರೆ ಎಂದರು. ಈ ಸಂದರ್ಭ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಶಹಜಹಾನ್ ತೋನ್ಸೆ, ಗುಲ್ಶನ್ ಮೊಹಮ್ಮದ್, ಅನ್ವರ್ ಅಲಿ, ದಿನಕರ್ ಉಚ್ಚಿಲ, ಅಶ್ಫಾಕ್ ಅಬ್ದುಲ್ ಅಲಿ, ರಿಯಾಜ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
17 Dec 2021, 12:38 PM
Category: Kaup
Tags: