ಜನವರಿ 2 : ಫಲಿಮಾರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಫಲಿಮಾರು : ಹೊಯ್ಗೆ ಫ್ರೆಂಡ್ಸ್, ಹೊಯ್ಗೆ (ರಿ.) ಫಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ
ರಕ್ತದಾನ ಶಿಬಿರ ಜನವರಿ 2ರ ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ ಗಂಟೆ 2ರ ವರೆಗೆ ಫಲಿಮಾರಿನ ಗಣೇಶ ಮಂಟಪದಲ್ಲಿ ಜರಗಲಿದೆ.
ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲಿಚ್ಛಿಸುವವರು ಪಾಲ್ಗೊಳ್ಳಬಹುದು. ಈ ಬಗ್ಗೆ ಎಲ್ಲರಿಗೂ ಮಾಹಿತಿ ಹಂಚಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತೇಜಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:
ರಾಘವೇಂದ್ರ ಸುವರ್ಣ- 8197605299
ಪ್ರತಾಪ್ - 9743339093
