ಕುತ್ಯಾರು : ಸೈಬರ್ ಸುರಕ್ಷತಾ ಅರಿವು ಕಾರ್ಯಕ್ರಮ
ಕಾಪು : ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಸಭಾಂಗಣದಲ್ಲಿ ಡಿಸೆಂಬರ್ 23 ರ ಗುರುವಾರದಂದು ಸೈಬರ್ ಸುರಕ್ಷತಾ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇಂದಿನ ಕಂಪ್ಯೂಟರ್ ಯುಗದಲ್ಲಿ ಅಂತರ್ಜಾಲದ ಮಿತಿಮೀರಿದ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ಪರಿಣಾಮಗಳನ್ನು ವಿವರಿಸುವ ಅಂಗವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ವಿಷಯ ತಜ್ಞರಾಗಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ರಾಜಶ್ರೀ ನಂಬಿಯಾರ್ ಭಾಗವಹಿಸುವರು. ಪೂರ್ವಾಹ್ನ 10 ರಿಂದ ಕಾರ್ಯಕ್ರಮವು ಆರಂಭವಾಗುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನ ಸ್ಥಾಪಕಾಧ್ಯಕ್ಷ ವಿದ್ವಾನ್ ಶಂಭುದಾಸ ಗುರೂಜಿ ವಹಿಸಲಿದ್ದು ಪ್ರಾಂಶುಪಾಲ ಗುರುದತ್ತ ಸೋಮಯಾಜಿ, ಶಿಕ್ಷಕವೃಂದ ಮತ್ತು ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು.
ಆಸಕ್ತರು ಈ ಮಾಹಿತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
