ರುಡ್ಸೆಟ್ನಿಂದ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ವಿಘ್ನೇಶ್ವರ ಪ್ರಿಂಟರ್ಸ್ಗೆ ಕೆನರಾ ಬ್ಯಾಂಕಿನ ವಿವಿಧ ರಾಜ್ಯಗಳ ಅಧಿಕಾರಿಗಳ ಭೇಟಿ - ಕಾರ್ಯ ವೈಖರಿಗೆ ಮೆಚ್ಚುಗೆ
ಉಡುಪಿ : ರುಡ್ಸೆಟ್ ಸಂಸ್ಥೆ ಬ್ರಹ್ಮಾವರದ ಸಹಕಾರ ದೊಂದಿಗೆ 82 ಜನ ಕೆನರಾ ಬ್ಯಾಂಕ್ ಅಧಿಕಾರಿಗಳು ಮಲ್ಪೆ ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ಗೆ ಭೇಟಿ ನೀಡಿದರು.
ರುಡ್ಸೆಟ್ ಸಂಸ್ಥೆಯಿಂದ ತರಬೇತಿ ಪಡೆದು ಯಶಸ್ವಿ ಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಗೆ 82 ಜನ ಕೆನರಾ ಬ್ಯಾಂಕಿನ ವಿವಿಧ ರಾಜ್ಯಗಳ ಅಧಿಕಾರಿಗಳು ಭೇಟಿ ನೀಡಿ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು ಮತ್ತು ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ತಮ್ಮ ಮಾರ್ಗದರ್ಶನ ಅಗತ್ಯ ಎಂಬ ಮಾತನ್ನು ತಿಳಿಸಿದರು.
ಸಂಸ್ಥೆಯ ಮಾಲಕರಾದ ಎಮ್ ಮಹೇಶ್ ಕುಮಾರ್ ರವರಿಗೆ ಕೆನರಾ ಬ್ಯಾಂಕ್ ವತಿಯಿಂದ ಗೌರವ ಸ್ಮರಣಿಕೆ ನೀಡಿ ಗೌರವಿಸಿದರು. ಕೆನರಾ ಬ್ಯಾಂಕ್ ನ ಉನ್ನತ ಅಧಿಕಾರಿ ಗಳು ಹಾಗೂ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ಹಾಗೂ ಸಹಾಯಕರಾದ ಪ್ರಥ್ವಿ ರಾಜ್. ವಿಘ್ನೇಶ್ವರ ಪ್ರಿಂಟರ್ಸ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
