ಜನತಾದಳದ ಅಭ್ಯರ್ಥಿಗಳನ್ನು ಗೆಲ್ಲಿಸಿ, ರಾಷ್ಟ್ರೀಯ ಪಕ್ಷಗಳ ಕುತಂತ್ರಕ್ಕೆ ಬಲಿಯಾಗದಿರಿ : ಯೋಗೀಶ್ ವಿ ಶೆಟ್ಟಿ ಬಾಲಾಜಿ
ಕಾಪು : ಈ ಬಾರಿ ಕಾಪು ಪುರಸಭಾ ಚುನಾವಣೆಯಲ್ಲಿ ಜನತಾದಳ ಪಕ್ಷವು 7 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪುರಸಭೆಯಲ್ಲಿ ನಾವೇ ನಿರ್ಣಾಯಕವಾಗಲಿದ್ದೇವೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲ. ಜನತಾದಳ ಮತ ವಿಭಜನೆಗೆ ನಿಂತಿಲ್ಲ ಬದಲಾಗಿ ಜನರ ಪರವಾಗಿದೆ ಎಂದು ಜನತಾದಳ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಬಾಲಾಜಿ ಹೇಳಿದರು.
ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಪಕ್ಷದ ವತಿಯಿಂದ ಆಯೋಜಿಸಿದ್ದ ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಪುರಸಭೆಯಿಂದ ತೊಂದರೆಯಾಗದು ಎಂದಿದ್ದ ಪಕ್ಷಗಳು ಇಂದು ಹತ್ತು ಪಟ್ಟು ತೆರಿಗೆ ಹೆಚ್ಚಿಸಿ ಜನರಿಗೆ ತೊಂದರೆಯಾಗಿದೆ. ತರಾತುರಿಯಲ್ಲಿ ಪ್ರಾಧಿಕಾರ ತರುವ ಅಗತ್ಯವೇನಿತ್ತು?. ರಾಷ್ಟ್ರೀಯ ಪಕ್ಷಗಳ ಕುತಂತ್ರಕ್ಕೆ ಬಲಿಯಾಗದಿರಿ ಎಂದರು.
ಈ ಸಂದರ್ಭ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
