ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆದಿಉಡುಪಿ : ಬೈದಶ್ರೀ ವಾರ್ಷಿಕ ಶ್ರೇಷ್ಠ ಪ್ರಶಸ್ತಿ ಪ್ರದಾನ, 'ದೇಯಿ ಬೈದೆದಿ' ಪುಸ್ತಕ, ಭಾವಚಿತ್ರ ಬಿಡುಗಡೆ, ಗರೋಡಿ ಪೂ ಪೂಜಾನೆಕಾರರ ಸಮ್ಮೇಳನ, ಸಮ್ಮಾನ
ಉಡುಪಿ : ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿಉಡುಪಿ ಇವರು ಕೊಡಮಾಡುವ ಬೈದಶ್ರೀ ವಾರ್ಷಿಕ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭವು ಬೈದಶ್ರೀಯಲ್ಲಿ ಜರಗಿತು.
ಹಿರಿಯ ಬೈದರ ದರುಶನ ಪಾತ್ರಿ ಕಲ್ಮoಜೆ ರಾಘು ಪೂಜಾರಿ ಹಾಗೂ ಹಿರಿಯ ಗರೋಡಿ ಸೇವಕರಾದ ಅಪ್ಪು ಮಡಿವಾಳ ಇವರಿಗೆ ನಗದು ಸಹಿತ ಪ್ರಶಸ್ತಿ ನೀಡಲಾಯಿತು.
ದಾಮೋದರ ಕಲ್ಮಾಡಿ ಹಾಗೂ ಚೆಲುವ ರಾಜ್ ಪೆರಂಪಳ್ಳಿ ಇವರು ಬರೆದ 'ದೇಯಿ ಬೈದೆದಿ' ಕನ್ನಡ ಆವೃತ್ತಿ ಪುಸ್ತಕ ಬಿಡುಗಡೆ ಹಾಗೆಯೇ ವೀನಸ್ ಇಂಟರ್ನ್ಯಾಷನಲ್ ಸಂಸ್ಥೆ ವತಿಯಿಂದ ಹರೀಶ್ ಎಮ್ ಕಲ್ಮಾಡಿ ಯವರು ಕೊಡ ಮಾಡಿದ ' ದೇಯಿ ಬೈದೆದಿ ಭಾವಚಿತ್ರವನ್ನು ಮುಖ್ಯ ಅತಿಥಿ ಅಚ್ಚುತ ಕಲ್ಮಾಡಿಯವರು ಅನಾವರಣಗೊಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ದಾಮೋದರ ಕಲ್ಮಾಡಿ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲ್ಮಾಡಿ ಗರೋಡಿ ಗೌರವ ಅಧ್ಯಕ್ಷರಾದ ಅಚ್ಚುತ ಕಲ್ಮಾಡಿಯವರು ಮಾತನಾಡುತ್ತ ಇದೊಂದು ಬೈದರ ಸಂಶೋಧನ ಕೇಂದ್ರ ಅಪರೂಪವಾಗಿದ್ದು ಇದನ್ನು ಉಳಿಸಿ ಬೆಳೆಸುವ ಅವಶ್ಯಕತೆ ಇದೆ ಎಂದರು.
ಗರೋಡಿ ಪೂ ಪೂಜಾನೆಕಾರರ ಸಮ್ಮೇಳನ : ಸಂಪನ್ಮೂಲ ವ್ಯಕ್ತಿಗಳಾಗಿ ಕಲ್ಮoಜೆ ರಾಘು ಪೂಜಾರಿ, ಪಾಂಗಳ ಗುಡ್ಡೆ ಗರೋಡಿ ಮನೆ ಸುಧಾಕರ್ ಡಿ ಅಮೀನ್, ಕಿನ್ನಿಮುಲ್ಕಿ ಗರೋಡಿಯ ಭಾಸ್ಕರ್ ಸುವರ್ಣ ಕನ್ನರ್ಪಡಿ ಭಾಗವಹಿಸಿದ್ದರು.
ಸಮ್ಮಾನ : ಕರ್ನಾಟಕ ತುಳು ರತ್ನ ಪ್ರಶಸ್ತಿ ಪಡೆದ ಗಂಗಾಧರ್ ಕಿದಿಯೂರ್, ಕರ್ನಾಟಕ ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿ ರಾಜ್ಯ ಸಂಚಾಲಕರಾಗಿ ಆಯ್ಕೆಯಾದ ಎಮ್ ಮಹೇಶ್ ಕುಮಾರ್ ಮಲ್ಪೆ ಹಾಗೂ ಕರ್ನಾಟಕ ಸರಕಾರದಿಂದ ಸ್ಕೌಟ್ ಸೇವೆಗಾಗಿ ವಿಶೇಷ ಪ್ರಶಸ್ತಿಯನ್ನು ರಾಜ್ಯಪಾಲ ರಿಂದ ಪಡೆದ ಶೇಖರ್ ಮಾಸ್ಟರ್ ಕಲ್ಮಾಡಿ ಇವರುಗಳನ್ನು ಸಮ್ಮಾನಿಸಲಾಯಿತು.
ಬೈದಶ್ರೀಯ ಕಾರ್ಯದರ್ಶಿ ಎಮ್ ಮಹೇಶ್ ಕುಮಾರ್ ಸ್ವಾಗತಿಸಿದರು. ಕೋಶಾಧಿಕಾರಿ ಮಹೇಶ್ ನಯಂಪಲ್ಲಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ವಿಶ್ವಸ್ತರಾದ ಗಂಗಾಧರ್ ಕಿದಿಯೂರು ವಂದನಾರ್ಪಣೆ ಸಲ್ಲಿಸಿದರು.
