ಅಮ್ಚೆ ಸಂಸಾರ್ ಕೊಂಕಣಿ ಸಿನೆಮಾ : ಕೊಲ್ಕತ್ತಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್‌ಗೆ ಆಯ್ಕೆ
ಉಡುಪಿ : ರಾಜಾಪುರ ಸಾರಸ್ವತ ಕೊಂಕಣಿ ಭಾಷೆಯ ಅಮ್ಚೆ ಸಂಸಾರ್ ಕೊಂಕಣಿ ಸಿನೆಮಾ 2021-22 ನೇ ಸಾಲಿನ ಕೊಲ್ಕತ್ತಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಗೆ ಅಧಿಕೃತವಾಗಿ ಆಯ್ಕೆಗೊಂಡಿದೆ.
ಈ ಸಿನಿಮಾವನ್ನು ಮಾಡಲು ಕಳೆದ ಎರಡು ವರ್ಷಗಳಿಂದ ನಾವು ಪಟ್ಟ ಪರಿಶ್ರಮಕ್ಕೆ ಇಂದು ಬೆಲೆ ಸಿಕ್ಕಂತಾಗಿದೆ. ಅದೆಷ್ಟೋ ಸಿನೆಮಾ ನಿರ್ದೇಶಕರು, ಸಿನೆಮಾ ತಂಡದವರು ತಾವು ಮಾಡಿದ ಸಿನೆಮಾ ಒಮ್ಮೆಯಾದರೂ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಆಯ್ಕೆ ಆಗಬೇಕು ಎಂಬ ಕನಸನ್ನು ಇಟ್ಟುಕೊಂಡಿರುತ್ತಾರೆ. ನಮ್ಮ ತಂಡದ ಈ ಕನಸು ಇಂದು ನನಸಾಗಿದೆ.
ಅಂತರಾಷ್ಟ್ರೀಯ ಸಿನೆಮಾ ಸ್ಪರ್ಧೆಯಲ್ಲಿ ಆಯ್ಕೆಗೊಂಡಿದ್ದು, ಪ್ರಶಸ್ತಿ ಗೆದ್ದಷ್ಟೇ ಖುಷಿ ನಮ್ಮದಾಗಿದೆ ಎಂದು ಅಮ್ಚೆ ಸಂಸಾರ್ ಕೊಂಕಣಿ ಸಿನೆಮಾದ ಛಾಯಾಗ್ರಾಹಕರಾದ ಭುವನೇಶ್ ಪ್ರಭು ಹಿರೇಬೆಟ್ಟು ತಿಳಿಸಿದರು.
