ರಾಜ್ಯದಲ್ಲಿ ಎಥೆನಾಲ್ ಪಾಲಿಸಿ ಜಾರಿಗೆ ತರಲು ತೀರ್ಮಾನ ; ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಆರಂಭ ಕುರಿತಂತೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು : ಸಚಿವ ಶಂಕರ ಬ ಪಾಟೀಲ
Thumbnail
ಉಡುಪಿ : ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆ ಮಾಡುವ ಕುರಿತಂತೆ, ಎಥೆನಾಲ್ ಪಾಲಿಸಿಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಹೇಳಿದರು. ಅವರು ಇಂದು ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ, ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಉಡುಪಿಯ ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಆರಂಭ ಕುರಿತಂತೆ, ಕಾರ್ಖಾನೆಯ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಚರ್ಚಿಸಿ, ಕಾರ್ಖಾನೆ ಆರಂಭಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಪರ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಅಶೋಕ್, ದ.ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.
31 Dec 2021, 06:55 PM
Category: Kaup
Tags: