ಸಂತ ಮೇರಿ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನ
Thumbnail
ಶಿರ್ವ:ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಕಾಲೇಜಿನ ದೃಶ್ಯ ಶ್ರವ್ಯ ಕೊಠಡಿಯಲ್ಲಿ ಆಯೋಜಿಸಲಾಯಿತು. ಪದವಿ ಕಾಲೇಜುಗಳಲ್ಲಿ ಹೊಸತಾಗಿ ಸೇರ್ಪಡೆ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 15 ರಿಂದ 18 ವರ್ಷದೊಳಗಿನ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.    ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿ ಡಾ| ವೈಷ್ಣವಿ ರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಅಭಿಯಾನಕ್ಕೆ ಸಹಕಾರವನ್ನು ನೀಡಿದ ಕಾಲೇಜಿನ ವಿದ್ಯಾರ್ಥಿ ಅನುಪ್ ನಾಯಕ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಶಶಿ ಆಶಾ ಕಾರ್ಯಕರ್ತರಾದ ಸಂಗೀತ, ವಿಜಯ, ನಿರ್ಮಲರವರು ನೆರವೇರಿಸಿ ಕೊಟ್ಟರು.
03 Jan 2022, 01:36 PM
Category: Kaup
Tags: