ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
Thumbnail
ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13ರಂದು ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲು ಉದ್ದೇಶಿಸಿದೆ. ಈಗಾಗಲೇ ಬಿಸಿಎ, ಬಿಎಸ್ಸಿ (ಸಿ. ಎಸ್),ಬಿಇ( ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ ಎಸ್),ಎಂಎಸ್ಸಿ, ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.00 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7975230201ಗೆ ಸಂಪರ್ಕಿಸಬಹುದು ಮತ್ತು ಈ ಲಿಂಕಿನ ಮೂಲಕ CLICK HERE.. ನೋಂದಾಯಿಸಿಕೊಳ್ಳಬಹುದು ಎಂದು ಪ್ರಾಂಶುಪಾಲರು ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
08 Jan 2022, 07:35 PM
Category: Kaup
Tags: