ಇನ್ನಂಜೆ : ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Thumbnail
ಕಾಪು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್, ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ, ಯುವತಿ ಮಂಡಲ (ರಿ.) ಇನ್ನಂಜೆ, ಬಿಲ್ಲವ ಸಂಘ (ರಿ.)ಇನ್ನಂಜೆ , ಜೆಸಿಐ ಶಂಕರಪುರ, ರಿಕ್ಷಾ ಚಾಲಕರು ಮತ್ತು ಮಾಲಕರು ಶಂಕರಪುರ, ಯುವ ಸೇನಾ ಮಡುಂಬು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಇನ್ನಂಜೆಯ ದಾಸ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ರಾಘವೇಂದ್ರ ರಾವ್ ಎರ್ಮಾಳ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಗೆಸ್ಟ್ ರಿಲೇಷನ್ ಮ್ಯಾನೇಜರ್ ರಾಘವೇಂದ್ರ ನಾಯಕ್ ಅಜೆಕಾರ್ ರಕ್ತದಾನದ ಮಹತ್ವ ಮತ್ತು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ ಇದರ ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ.ವೀಣಾ ರಕ್ತದಾನದ ಬಗೆಗಿನ ತಪ್ಪು ಕಲ್ಪನೆಗಳ ಬಗ್ಗೆ ತಿಳಿಸಿದರು. ಯುವತಿ ಮಂಡಲದ ಗೌರವ ಸಲಹೆಗಾರರಾದ ಶ್ವೇತ ಎಲ್ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸತೀಶ್ ಎನ್. ಪೂಜಾರಿ, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸೇಲ್ಸ್ ಮ್ಯಾನೇಜರ್ ಆಗಿರುವ ನಿತಿನ್ ಶೇಟ್, ಬಿಲ್ಲವ ಸಂಘ ಇನ್ನಂಜೆ ಅಧ್ಯಕ್ಷರಾದ ಸದಾಶಿವ ಪೂಜಾರಿ, ಶಂಕರಪುರ ರಿಕ್ಷಾ ಚಾಲಕರು ಮತ್ತು ಮಾಲಕರು ಸಂಘದ ಅಧ್ಯಕ್ಷರಾದ ಕರುಣಾಕರ ದೇವಾಡಿಗ, ಜೆಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ಜಗದೀಶ್ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವತಿ ಮಂಡಲದ ಅಧ್ಯಕ್ಷರಾದ ಆಶಾ ನಾಯಕ್ ಸ್ವಾಗತಿಸಿ, ಸ್ಥಾಪಕಾಧ್ಯಕ್ಷರಾದ ಸುಮಲತಾ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀ ನಾಯಕ್ ವಂದಿಸಿದರು.
Additional image
09 Jan 2022, 10:05 PM
Category: Kaup
Tags: