ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷ ಆಚರಣೆ
ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ನ ಸದಸ್ಯರು ಮತ್ತು ಕುಟುಂಬದವರಿಂದ ಇತ್ತೀಚೆಗೆ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಕೆ. ಪದ್ಮನಾಭ ಕಾಂಚನ್ ರವರು ಕ್ರಿಸ್ಮಸ್ ಹಬ್ಬದ ಆಚರಣೆಯ ಹಿನ್ನೆಲೆ ಮತ್ತು ಸಂಪ್ರದಾಯಗಳ ಕುರಿತು ಮಾತನಾಡಿ ವಿಶ್ವ ಶಾಂತಿ, ಸೌಹಾರ್ದತೆ ಬಗ್ಗೆ ಮಾತನ್ನಾಡಿದರು.
ಇನ್ನೋರ್ವ ಮುಖ್ಯ ಅತಿಥಿ, ನಿಕಟಪೂರ್ವ ಜಿಲ್ಲಾ ಗವರ್ನರ್ ರಾಜರಾಮ ಭಟ್ ಅವರು ಮಾತನಾಡಿ ಕ್ಲಬ್ ನ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕ್ಲಾರೆನ್ಸ್ ಡಿಸೋಜ ಮತ್ತು ಸೇವಾಧಾಮ ವಿಶೇಷ ಪುನರ್ವಸತಿ ಸಂಸ್ಥೆಯ ರಾಯನ್ ಫೇರ್ನಾಂಡಿಸ್ ಇವರನ್ನು ಸನ್ಮಾನಿಸಲಾಯಿತು ಹಾಗೂ ಸಂಸ್ಥೆಯ ಚಟುವಟಿಕೆಗೆ ರೂ.5000 ದೇಣಿಗೆ ವಿತರಿಸಲಾಯಿತು.
ರೀನಾ ಶೆಟ್ಟಿ ಹಾಗೂ ಲಿಯೋ ಅಂದ್ರಾದೆಯವರು, ಸದಸ್ಯರಿಗೆ ವಿವಿಧ ಮನೋರಂಜನಾ ಆಟಗಳನ್ನು ನಡೆಸಿಕೊಟ್ಟರು.
ಕ್ಲಬ್ ನ ಅಧ್ಯಕ್ಷ ಶಂಭು ಶಂಕರ್ ರವರು ಸ್ವಾಗತಿಸಿದರು. ಅಲೆನ್ ಲೂವಿಸ್ ಮತ್ತು ಗಿರೀಶ್ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರಕಾಶ್ ವಂದಿಸಿದರು.
