ಉಚ್ಚಿಲದ ಕುಂಜೂರು ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ
Thumbnail
ಕಾಪು : ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದ ಕುಂಜೂರು ಸಮೀಪದ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದ್ದು, ರೈಲ್ವೆ ಹಳಿಯ ಸಮೀಪದಲ್ಲಿಯೇ ಈತನ ಮನೆಯಿದ್ದು, ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪಡುಬಿದ್ರಿ ಪೋಲೀಸರು ಆಗಮಿಸಿ ತನಿಖೆ ಮುಂದುವರಿಸಿದ್ದಾರೆ, ಛಿದ್ರ ಛಿದ್ರವಾದ ಮೃತ ಶರೀರವನ್ನು ಆಸಿಫ್ ಆಪದ್ಬಾಂಧವರವರ ತಂಡ ಕಾರ್ಯಾಚರಿಸಿ ಪಡುಬಿದ್ರಿ ಶವಾಗಾರಕ್ಕೆ ರವಾನಿಸಲಾಗಿದೆ.
15 Jan 2022, 12:49 PM
Category: Kaup
Tags: