ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್. ಅವರಿಗೆ ಸಮ್ಮಾನ‌
Thumbnail
ಸುರತ್ಕಲ್ : ತಡಂಬೈಲು ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಏಳನೇ ವರ್ಷದ ತಾಳಮದ್ದಳೆ ಸಪ್ತಾಹದ ಸಮರೋಪ ಸಮಾರಂಭದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ , ಹಿರಿಯ ಯಕ್ಷಗಾನ ವಿದ್ವಾಂಸ,ಪ್ರಸಂಗಕರ್ತ,ಸಾಹಿತಿ‌ ಶ್ರೀಧರ ಡಿ.ಎಸ್.ಅವರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ವಹಿಸಿದ್ದರು. ನಿವೃತ್ತ ಉಪನ್ಯಾಸಕ ನಾರಾಯಣ ಹೆಗಡೆ ಉಡುಪಿ ಅವರು ಅಭಿನಂದನೆಯ ಮಾತುಗಳನ್ನಾಡಿದರು. ಯಕ್ಷಗಾನ ಸಂಘಟಕ ,ಜ್ಯೋತಿಷಿ ಶ್ರೀಮಧುಕರ ಭಾಗವತರು ಕುಳಾಯಿ, ಕಣಿಪುರ ಪತ್ರಿಕೆಯ ಸಂಪಾದಕ ನಾರಾಯಣ ಚೆಂಬಲ್ತಿಮಾರ್ ಮುಂತಾದವರು ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಗುರುಗಳಾದ ಸುರತ್ಕಲ್ ವಾಸುದೇವ ರಾವ್, ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಅಧ್ಯಕ್ಷರಾದ ಸುಲೋಚನಾ ವಿ.ರಾವ್ ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸರ್ವ ಸದಸ್ಯರು ಭಾಗವಹಿಸಿದ್ದರು.
17 Jan 2022, 05:56 PM
Category: Kaup
Tags: