ಓಮಸತ್ವ ನೀಡುವ ನೆಪದಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ
ಮಂಗಳೂರು : ಇಲ್ಲಿನ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ವಿಧವೆ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಗೂಸಾ ತಿಂದು ಪೋಲಿಸರ ಅತಿಥಿಯಾದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಬಜ್ಪೆ ಠಾಣಾ ವ್ಯಾಪ್ತಿಯ ಕಂದಾವರ ಗ್ರಾಮ ಪಂಚಾಯತ್ ನ ಕಜೆಪದವು ಎಂಬಲ್ಲಿ ಔಷಧಿ ಮಾರುವ ನೆಪದಲ್ಲಿ ಮನೆಗೆ ಬಂದ ಆರೋಪಿ ಓಮಸತ್ವ ನೀಡುವ ನೆಪದಲ್ಲಿ ಮನೆಯಲ್ಲಿದ್ದ ವಿಧವೆ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಆ ಒಂಟಿ ಮಹಿಳೆ ಕಿರುಚಿದ್ದು, ಸಾರ್ವಜನಿಕರು ಕೂಡಲೇ ಮನೆ ಬಳಿ ಜಮಾಯಿಸಿದ್ದಾರೆ ಎನ್ನಲಾಗಿದೆ. ನಂತರ ಕಾಮುಕನಿಗೆ ಧರ್ಮದೇಟು ಬಿದ್ದಿದ್ದು, ಬಜ್ಪೆ ಪೋಲಿಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಒಬ್ಬಂಟಿಯಾಗಿರುವ ಮಹಿಳೆಯರು ಅಪರಿಚಿತರಿಗೆ ವ್ಯಾಪಾರದ ನೆಪದಲ್ಲಿ ಮನೆಯ ಆವರಣ ಪ್ರವೇಶಿಸಲು ಬಿಡದೇ ಜಾಗೃತವಾಗಿರಬೇಕು ಎಂಬ ಒಕ್ಕಣೆಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
