ಕಲ್ಯಾಣಪುರ ರೋಟರಿ ಕ್ಲಬ್ : ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ
ಉಡುಪಿ: ಕಲ್ಯಾಣಪುರದ ಟಿ.ಎಂ.ಎ ಪೈ ಪ್ರೌಢ ಶಾಲೆಯ ಇಂಟರ್ಯಾಕ್ಟ್ ಕ್ಲಬ್ (Interact Club) ಹಾಗೂ ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಿತು.
ದೊಡ್ಡಣಗುಡ್ಡೆ ಎ.ವಿ ಬಾಳಿಗಾ ಆಸ್ಪತ್ರೆಯ ಮಾನಸಿಕ ಆರೋಗ್ಯ ಸಲಹೆಗಾರರಾಗಿರುವ ಪದ್ಮ ರಾಘವೇಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.
ಕಲ್ಯಾಣಪುರ ರೋಟರಿ ಕ್ಲಬ್ ಅಧ್ಯಕ್ಷ ಶಂಭುಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರಕಾಶ್, ಸದಸ್ಯರಾದ ರಾಮ ಪೂಜಾರಿ, ವಿದ್ಯಾಧರ ಕಿಣಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯ ಶೇಖರ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸುರೇಖ ವಂದಿಸಿದರು. ಸತ್ಯ ಶಂಕರ್ ಭಟ್ ನಿರೂಪಿಸಿದರು.
