ಗಾಂಜಾ ಸಾಗಾಟ ಮಾಡುತ್ತಿದ್ದ ಕಾರು ಸಹಿತ ಇಬ್ಬರ ಸೆರೆ 2.220 ಕೆಜಿ ಗಾಂಜಾ ವಶಕ್ಕೆ
Thumbnail
ಮಂಗಳೂರು :ಕೇರಳದ ಕುಂಜತ್ತೂರು ಪರಿಸರದಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ದಸ್ತಗಿರಿ ಮಾಡಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಫೆಬ್ರವರಿ 16ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ನಾರ್ಲ ಪಡೀಲ್ ರಾಮನಗರ ಎಂಬಲ್ಲಿ ಕಾರಿನಲ್ಲಿ ಅಕ್ರಮ ಮಾದಕ ವಸ್ತುವಾದ ಗಾಂಜಾವನ್ನು ಕೇರಳದಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತ್ರತ್ವದ ತಂಡ ದಾಳಿ ನಡೆಸಿ ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಿಂಜ ಗ್ರಾಮ, ಹೊಸಂಗಡಿಯ ಪ್ರಫುಲ್ ರಾಜ್ (23), ಮತ್ತು ಬಂಟ್ವಾಳ ತಾಲೂಕಿನ ಬೊಳಿಯಾರು, ಸಜಿಪ ಗ್ರಾಮದ ಅವಿನಾಶ್ (24) ಎಂಬವರನ್ನು ದಸ್ತಗಿರಿ ಮಾಡಿ ಅವರ ವಶದಿಂದ 2.220 ಕೆಜಿ ತೂಕದ ಗಾಂಜಾ, ನಗದು ರೂ. 1200/- 2 ಮೊಬೈಲ್ ಫೋನ್ ಗಳು ಹಾಗೂ ಮಾರುತಿ ಸ್ವಿಪ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 5,50,400/-ಆಗಬಹುದು. ಆರೋಪಿಗಳ ಪೈಕಿ ಅವಿನಾಶ್ ಎಂಬಾತನು ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ವಾಹನಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದನು. ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
17 Feb 2022, 11:34 AM
Category: Kaup
Tags: