ಬಂಟಕಲ್ಲು : ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
Thumbnail
ಕಾಪು : ಬಂಟಕಲ್ಲು ಶಾಲೆಯಲ್ಲಿ ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮೀನ್ ಸಹಕಾರದೊಂದಿಗೆ ನಡೆದ ಪೋಲಿಯೋ ಲಸಿಕಾ ಶಿಬಿರಕ್ಕೆ ಶಿರ್ವ ಗ್ರಾ.ಪಂ ಅಧ್ಯಕ್ಷ ಕೆ ಆರ್ ಪಾಟ್ಕರ್ ಚಾಲನೆ ನೀಡಿದರು. ಬೆಳಗ್ಗೆ 11 ಗಂಟೆ ಹೊತ್ತಿಗೆ ನೂರಕ್ಕೂ ಅಧಿಕ ಮಕ್ಕಳು ಲಸಿಕೆ ಪಡೆದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದರು. ಶಿರ್ವ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಲಸಿಕಾ ಕೇಂದ್ರಗಳ ಸಿಬ್ಬಂದಿಯವರಿಗೆ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ತಿಳಿಸಿದರು. ಲಯನ್ಸ್ ಕಾರ್ಯದರ್ಶಿ ಅನಿತಾ ಮೆಂಡೋನ್ಸಾ, ರೀನಾ, ಐರಿನ್, ಅಂಗನವಾಡಿ ಕಾರ್ಯಕರ್ತೆ ವಿನಯಾ, ಆಶಾ ಕಾರ್ಯಕರ್ತೆಯರಾದ ಸವಿತಾ, ಕಮಲ, ರೆಹಮತ್ ಉಪಸ್ಥಿತರಿದ್ದರು.
27 Feb 2022, 12:14 PM
Category: Kaup
Tags: