ರೋಟರಿ ಕಲ್ಯಾಣಪುರದಿಂದ ವಿಶ್ವ ಮಹಿಳಾ ದಿನಾಚರಣೆ ; ಆಶಾ ಕಾರ್ಯಕರ್ತೆಯರಿಗೆ ಸನ್ಮಾನ
ಉಡುಪಿ : ರೋಟರಿ ಕಲ್ಯಾಣಪುರದ ವತಿಯಿಂದ
ವಿಶ್ವ ಮಹಿಳಾ ದಿನಾಚರಣೆ 2022 ಪ್ರಯುಕ್ತ ಮಾಚ್೯ 10ರಂದು ಕ್ಲಬ್ ನ ಸಭಾಂಗಣದಲ್ಲಿ ಅಧ್ಯಕ್ಷರಾದ ಶಂಭು ಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ, ಉಪ್ಪೂರು, ಮತ್ತು ಹಾವಂಜೆ ಗ್ರಾಮದ 11 ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಲಾಯಿತು.
ಮುಖ್ಯ ಅತಿಥಿಗಳಾಗಿ ರಾಜಾರಾಂ ಭಟ್, ನಿಕಟಪೂರ್ವ ಜಿಲ್ಲಾ ಗವರ್ನರ್ ಪದ್ಮನಾಭ ಕಾಂಚನ್, ಸಹಾಯಕ ಗವರ್ನರ್ ರವರು ಭಾಗವಹಿಸಿ ಶುಭ ಹಾರೈಸಿದರು.
ನಿಯೋಜಿತ ಅಧ್ಯಕ್ಷರಾದ ಶಾರ್ಲೆಟ್ ಲೂವಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಸೇನಾನಿ ಬ್ರಯಾನ್ ಡಿಸೋಜರವರು ಮಹಿಳಾ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು. ವೃತ್ತಿ ಸೇವೆ ನಿರ್ದೇಶಕರಾದ ಶಂಕರ್ ಸುವರ್ಣ ಸನ್ಮಾನಿತರನ್ನು ಸಭೆಗೆ ಪರಿಚಯಿಸಿದರು. ಅಲೆನ್ ಲೂವಿಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರಕಾಶ್ ವಂದಿಸಿದರು.
