ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭ
ಕಾಪು : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭವು ಏಪ್ರಿಲ್ 3ರಂದು ಕಾಪು ಶ್ರೀವೀರಭದ್ರ ಸಭಾಭವನ ಇಲ್ಲಿ ಜರಗಿತು.
ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸ್ಥಾಪಕ ಅಧ್ಯಕ್ಷರಾದ ಎ.ಎಸ್.ಎನ್.ಹೆಬ್ಬಾರ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು.
ಈ ಸದರ್ಭ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರಕುಮಾರ್ ಕೋಟ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಕೋಶಾಧ್ಯಕ್ಷರಾದ
ಮನೋಹರ್ ಪಿ, ಕಾಪು ತಾಲೂಕು ಘಟಕದ ನಿಯೋಜಿತ ಅಧ್ಯಕ್ಷರಾದ ಬಿ ಪುಂಡಲೀಕ ಮರಾಠೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಖ್ಯಾತ ಬಾನುಲಿ ಕಲಾವಿದ, ಶ್ರೀ ಗಣೇಶ್ ಗಂಗೊಳ್ಳಿಯವರಿಂದ ಗೀತಾಗಾಯನ ಕಾರ್ಯಕ್ರಮ ಜರಗಿತು.
