ಇನ್ನಂಜೆ ದಾಸ ಭವನದಲ್ಲಿ ಏಪ್ರಿಲ್ 18ರಂದು ಉಚಿತ ದಂತ ಚಿಕಿತ್ಸಾ ಶಿಬಿರ
ಕಾಪು : ಯುವತಿ ಮಂಡಲ (ರಿ.) ಇನ್ನಂಜೆ ಇದರ ಆಶ್ರಯದಲ್ಲಿ ಸಮುದಾಯ ದಂತ ಚಿಕಿತ್ಸಾ ವಿಭಾಗ ಮಣಿಪಾಲ ಮತ್ತು ರಾಜರಾಜೇಶ್ವರಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಇನ್ನಂಜೆ ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಏಪ್ರಿಲ್ 18, ಸೋಮವಾರ ಇನ್ನಂಜೆ ದಾಸಭವನದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1ಗಂಟೆವರೆಗೆ ಜರಗಲಿದೆ.
ಇನ್ನಂಜೆ ಯುವತಿ ಮಂಡಲದ ಅಧ್ಯಕ್ಷರಾದ ಆಶಾ ನಾಯಕ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮವನ್ನು ಇನ್ನಂಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಅತಿಥಿಗಳಾಗಿ ಸಮುದಾಯ ದಂತ ಚಿಕಿತ್ಸಾ ವಿಭಾಗ ಮಣಿಪಾಲದ ಡಾ| ತ್ರಿಷಾ ಹೆಗ್ಡೆ, ಉಡುಪಿ ಜಿಲ್ಲೆಯ
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಡಾ| ರೋಷನ್ ಕುಮಾರ್, ಇನ್ನಂಜೆ ಯುವತಿಮಂಡಲದ ಗೌರವ ಸಲಹೆಗಾರರಾದ ಶ್ವೇತ ಎಲ್ ಶೆಟ್ಟಿ, ಇನ್ನಂಜೆ ರಾಜರಾಜಶ್ವರಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ
ಪೂರ್ಣಿಮಾ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
