ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ
ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠ, ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ, ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್,ಜೊತೆ ಕಾರ್ಯದರ್ಶಿ ವಿಜಯ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಸಂತೋಷ ನಾಯ್ಕ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರಾದ ಅಲೆವೂರು ರಾಜೇಶ್ ಶೆಟ್ಟಿ ನೂತನ ಪಧಾದಿಕಾರಿಗಳನ್ನು ಘೋಷಣೆ ಮಾಡಿದರು.
ಕಾಪು ತಾಲೂಕು ನಿಕಟಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು, ನಿಕಟಪೂರ್ವ ಕಾರ್ಯದರ್ಶಿ ಶಫಿ ಉಚ್ಚಿಲ ಉಪಸ್ಥಿತರಿದ್ದರು.
