ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ; ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸೂಚನೆ
Thumbnail
ಕಾಪು : ಇಲ್ಲಿನ ವಿಧಾನ ಸಭಾ ವ್ಯಾಪ್ತಿಯ ಕೈಪುಂಜಾಲು, ಪೊಲಿಪು ಭಾಗಗಳಲ್ಲಿ ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಕಿರಣ್ ಆಳ್ವ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಬಂದರು ಹಾಗೂ ಮೀನುಗಾರಿಕೆ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಗುತ್ತಿಗೆದಾರರು, ಸ್ಥಳೀಯ ಮುಖಂಡರಾದ ಪ್ರವೀಣ್ ಕುಂದರ್ ಪೊಲಿಪು, ಜಗದೀಶ್ ಬಂಗೇರ, ನರೇಶ್ ಮೆಂಡನ್, ಅನಂತ್ ಕುಂದರ್, ಧನಂಜಯ ಸುವರ್ಣ, ಜಗದೀಶ್ ಕಾಂಚನ್, ಗಿರೀಶ್ ಕಾಂಚನ್, ನವೀನ್ ಅಮೀನ್, ಯೋಗೀಶ್ ಅಮೀನ್, ಪುರುಷೋತ್ತಮ ಪುತ್ರನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
23 May 2022, 06:02 PM
Category: Kaup
Tags: